ನವದೆಹಲಿ: ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡುವುದು “ಬೇಜವಾಬ್ದಾರಿತನ” ಎಂದು ಅವರು ಕಿಡಿಕಾರಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಲಾಕ್‌ಡೌನ್ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಸರ್ಕಾರ ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ಇಂತಹ ಸುಳ್ಳು ಸುದ್ದಿಗಳು ಜನರಲ್ಲಿ ಅನಗತ್ಯ ಆತಂಕವನ್ನು ಸೃಷ್ಟಿಸುತ್ತವೆ ಮತ್ತು ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಮಾತ್ರ ನಂಬಬೇಕು ಮತ್ತು ಖಚಿತಪಡಿಸಿಕೊಳ್ಳದೆ ಯಾವುದೇ ಸಂದೇಶಗಳನ್ನು ಹಂಚಿಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.








