ನವದೆಹಲಿ : ಇಂದಿನ ಕೋರಿಕೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ಸ್ಥಿರವಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಇದೀಗ ಮಾಹಿತಿ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಸೃಷ್ಟಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ವದಂತಿಗಳಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸ್ಪಷ್ಟನೆ ನೀಡಿದೆ. ದೇಶದಲ್ಲಿ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಮತ್ತು ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ ಎಂದು ಕಂಪನಿ ತಿಳಿಸಿದೆ.ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಸರಬರಾಜು ಮಾಡಲಾಗುತ್ತಿದ್ದು, ಅಗತ್ಯವಿರುವಷ್ಟು ದಾಸ್ತಾನು ಲಭ್ಯವಿದೆ ಎಂದು ಕಂಪನಿಯು ಸಾರ್ವಜನಿಕರಿಗೆ ಭರವಸೆ ನೀಡಿದೆ.








