ಬೆಂಗಳೂರು : ಇಸ್ರೇಲ್ ಇರಾನ್ ಯುದ್ಧದ ಪರಿಣಾಮದಿಂದಾಗಿ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚಾಗಿದ್ದು ಇದೀಗ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ ಆಗಿದೆ ಘಟನೆಯಲ್ಲಿ ಇಬ್ಬರು ಬಚಾವ್ ಆಗಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಇದೀಗ ಗ್ಯಾಸ್ ಸೋರಿಕೆಯಾಗದಂತೆ ಕ್ರಮ ವಹಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೇರಿಯಾಗಿದ್ದು, ಸಿಲೆಂಡರ್ ಗಳನ್ನು ತುಂಬಿದ ಲಾರಿ ತೆರಳುವಾಗ ಕಾರಿಗೆ ಡಿಕ್ಕಿಯಾಗಿ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.








