ಮೈಸೂರು : ದೇಶ ಸೇರಿದ ರಾಜ್ಯದ ಸರ್ಕಾರಿ ಕಚೇರಿಗಳು ಹಾಗೂ ಕೋರ್ಟ್ ಗಳಿಗೆ ಶಾಲಾ ಕಾಲೇಜುಗಳಿಗೆ ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಪ್ರಕರಣಗಳ ಸಂಖ್ಯೆ ಇತ್ತೀಚಿಗೆ ಹೆಚ್ಚಿತ್ತು. ಇದೀಗ ಹುಸಿ ಬಾಂಬ್ ಸಂದೇಶ ಕಳುಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಮೈಸೂರಲ್ಲಿ ದೆಹಲಿ ಪೊಲೀಸರಿಂದ ಆರೋಪಿ ಶ್ರೀನಿವಾಸ್ ನನ್ನ ಅರೆಸ್ಟ್ ಮಾಡಲಾಗಿದೆ.
ಮೈಸೂರಿನಲ್ಲಿ ಶ್ರೀನಿವಾಸ ಗಾಗಿ ಪೊಲೀಸರು ಖೆಡ್ಡಾ ತೋಡಿದ್ದಾರೆ. ಬಾಂಬ್ ಸ್ಪೋಟಿಸುವ ಸಂದೇಶ ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಶ್ರೀನಿವಾಸ್ ಬೃಂದಾವನ ಬಡಾವಣೆಯ ಎರಡನೇ ಹಂತದ ಮನೆಯಲ್ಲಿ ವಾಸವಾಗಿದ್ದ. ಆರನೇ ಕ್ರಾಸ್ ಮನೆಯಲ್ಲಿದ್ದ ಆತನನ್ನ ಸದ್ಯ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿಗೆ ಸರ್ಕಾರಿ ಕಚೇರಿಗಳು ಶಾಲಾ ಕಟ್ಟಡಗಳಿಗೆ ಬೆದರಿಕೆ ಬಂದಿತ್ತು.
ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ರವಾನೆಯಾಗಿತ್ತು. ಇಮೇಲ್ ಮುಖಾಂತರವಾಗಿ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ. ಸದ್ಯ ಶ್ರೀನಿವಾಸನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.








