ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಇಂದು ಶನಿವಾರ (ಮಾರ್ಚ್ 28, 2026) ಇಂಡಿಗೋ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದೆ. ರನ್ವೇ ಸಂಖ್ಯೆ 28 ರಲ್ಲಿ ಈ ಘಟನೆ ನಡೆದಿದ್ದು, ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ತಾಂತ್ರಿಕ ದೋಷ ಅಥವಾ ತುರ್ತು ಕಾರಣಗಳಿಂದಾಗಿ ವಿಮಾನವು ರನ್ವೇ 28ರಲ್ಲಿ ಇಳಿಯಬೇಕಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಮತ್ತು ತುರ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿದವು. ಅಗ್ನಿಶಾಮಕ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ವಿಮಾನವು ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ.
ಪ್ರಯಾಣಿಕರು ಸುರಕ್ಷಿತ:
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ವರ್ಗದವರು ಸಂಪೂರ್ಣವಾಗಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ತುರ್ತು ಭೂಸ್ಪರ್ಶದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯಲ್ಲಿ ಸಲ್ಪ ಮಟ್ಟಿನ ವ್ಯತ್ಯಯ ಉಂಟಾಗಿದ್ದರೂ, ಪರಿಸ್ಥಿತಿಯನ್ನು ಈಗ ಹತೋಟಿಗೆ ತರಲಾಗಿದೆ.
ಘಟನೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
An emergency landing made at IGI Airport in Delhi. Fire Department received a call at 10.53 am. Department says that the aircraft has landed: Delhi Fire Service
More details awaited.
— ANI (@ANI) March 28, 2026








