ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರ್ಯ ಗ್ರಹದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ.ಜೈಲು ಸಿಬ್ಬಂದಿ ಕಣ್ಣು ತಪ್ಪಿಸಲು ಕೈದಿಗಳು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಕೈದಿಗಳ ಈ ಒಂದು ಪ್ಲಾನ್ ಗೆ ಸ್ವತಃ ಪೊಲೀಸ್ ಅಧಿಕಾರಿಗಳೇ ಶಾಕ್ ಆಗಿದ್ದಾರೆ.
ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಡಿಯೋ ಮಾಡಿ ಹರಿಬಿಟ್ಟ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಲ್ಲಿ ಮೊಬೈಲ್ ಪತ್ತೆಗಾಗಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ನಟ ದರ್ಶನ್, ಅಭಿಷೇಕ್ ಇರುವ ಬ್ಯಾರಕ್ನಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಂದ್ರ ಕಾರಾಗೃಹದ 9ನೇ ಬ್ಯಾರಕ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಈ ವೇಳೆ ಡ್ರೈನೇಜ್ ನೀರು ಹೋಗುವ ಜಾಗದಲ್ಲಿ ಮೊಬೈಲ್ ಪತ್ತೆಯಾಗಿದೆ. ಬಳಸಿದ ಹಾಲಿನ ಪ್ಯಾಕೆಟ್ ಗಳಲ್ಲಿ ಸುತ್ತಿ ಮೊಬೈಲ್ ಬಚ್ಚಿಡಲಾಗಿತ್ತು. ಆರೋಪಿಗಳ ಕೈಯಲ್ಲಿಯೆ ಅಧಿಕಾರಿಗಳು ಮೊಬೈಲ್ ಗಳನ್ನು ಹೊರಗಡೆ ತೆಗೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪೊಲೀಸರು ಜೈಲಿನಲ್ಲಿ ಮತ್ತಷ್ಟು ತಪಾಸಣೆ ಮುಂದುವರೆಸಿದ್ದಾರೆ.








