ಗದಗ : ರಾಜ್ಯದಲ್ಲಿ ಸಿಲಿಂಡರ್ ಗಳ ಅಭಾವ ತುಂಬಾ ಇದ್ದು, ಇದೀಗ ಗದಗದಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ರೋಣ – ಗಜೇಂದ್ರಗಡ ಮಾರ್ಗವಾಗಿ ಕುಷ್ಟಗಿ ಪಟ್ಟಣಕ್ಕೆ ಹೊರಟಿದ್ದ ಲಾರಿ ತಿರುವಿನಲ್ಲಿ ಓವರಟೇಕ್ ಮಾಡಲು ಹೋದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದೆ.
ಸಿಲಿಂಡರ್ ತುಂಬಿದ್ದ ವಾಹನ ಇದಾಗಿದ್ದರಿಂದ ಕೆಲಕಾಲ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಅನಿಲ ಸ್ಫೋಟ ಆಗಿಲ್ಲ. ಭಾರತ್ ಗ್ಯಾಸ್ ಕಂಪನಿಗೆ ಸೇರಿದ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದ್ದರಿಂದ ಸಿಲಿಂಡರ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.








