ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಹಲವರಿಗೆ ಬೈಕ್ ಡಿಕ್ಕಿಯಾಗಿ ನವದಂಪತಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ನಡೆದಿದೆ.
ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಹೋಟೆಲ್ ಕೆಲಸ ಮುಗಿಸಿಕೊಂಡು ಊರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ ಬಾಬು ಮತ್ತು ಸಾವಿತ್ರಿ ಎಂದು ತಿಳಿದುಬಂದಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








