ಧಾರವಾಡ : ಜೈಲಿಗೆ ಹೋದರು ಪಾಗಲ್ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾನೆ. ಧಾರವಾಡ ಸೆಂಟ್ರಲ್ ಜೈಲಿನಿಂದಲೇ ಯುವಕ ವಿಡಿಯೋ ಕಾಲ್ ಮಾಡಿದ್ದಾನೆ. ಹೌದು ಧಾರವಾಡ ಸೆಂಟ್ರಲ್ ಜಲದಿಂದ ಅನ್ಯಕೋಮಿನ ಯುವಕನೊಬ್ಬ ಹಿಂದೂ ಅಪ್ರಾಪ್ತ ಬಾಲಕಿಗೆ ವಿಡಿಯೋ ಕಾಲ್ ಮಾಡಿ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.
ಸದ್ಯ ಪೋಕ್ಸೋ ಕೇಸ್ ನಲ್ಲಿ ಜೈಲಿನಲ್ಲಿರುವ ಆರೋಪಿ ಕೋರ್ಟ್ ನಲ್ಲಿ ನನ್ನ ಪರವಾಗಿ ಮಾತನಾಡುವಂತೆ ತಾಕತ್ತು ಮಾಡಿದ್ದಾನೆ ಅಲ್ಲದೇ ಕೈ ಮೇಲೆ ಸಂತ್ರಸ್ತೆಯ ಹೆಸರು ಬರೆದುಕೊಂಡಿದ್ದು, ಜೈವಿನಲ್ಲಿ ಈಗಲೂ ಮೊಬೈಲ್ ಗಳು ಇತರೆ ವಸ್ತುಗಳು ಕೈದಿಗಳಿಗೆ ಸುಲಭವಾಗಿ ಸಿಗುತ್ತಿವೆ ಎನ್ನುವುದಕ್ಕೆ ಇದೀಗ ಮತ್ತೊಂದು ಉದಾಹರಣೆ ದೊರೆತಿದೆ. ಜೈಲಾಧಿಕಾರಿಗಳು ಹಾಗೂ ಜೈಲಿನ ಸಿಬ್ಬಂದಿಗಳ ಸಹಕಾರ ಮತ್ತು ಸಹಾಯವಿಲ್ಲದೆ ಇಂತಹ ಕೃತ್ಯ ನಡೆಯಲು ಸಾಧ್ಯವಿಲ್ಲ.








