ಮುಂಬೈ : ದೇಶದ ಆರ್ಥಿಕ ಕ್ಷೇತ್ರದಲ್ಲಿ ಇಂದು ಭಾರಿ ಬೆಳವಣಿಗೆಯಾಗಿದ್ದು, ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದು ಡಾಲರ್ ಬೆಲೆ 95 ರೂಪಾಯಿ ತಲುಪುವ ಮೂಲಕ ವಹಿವಾಟು ನಡೆಸುತ್ತಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಹಿಂದೆ ಸರಿಯುತ್ತಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ. ರೂಪಾಯಿ ಮೌಲ್ಯ ಕುಸಿತದಿಂದಾಗಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಆಮದು ಮಾಡಿಕೊಳ್ಳುವ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.








