ಬೆಂಗಳೂರು : ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಇದೀಗ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ASI ಸುರೇಶ್ ಕಾನ್ಸ್ಟೇಬಲ್ ಗಳಾದ ಪ್ರಶಾಂತ್ ಹಾಗು ಸಾದಿಕ್ ಸಸ್ಪೆಂಡ್ ಆದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ.
ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನೂಪ್ ಶೆಟ್ಟಿ ಆದೇಶ ಹೋರಡಿಸಿದ್ದಾರೆ. ಕರ್ತವ್ಯ ನಿರ್ವಹಿಸುವ ವೇಳೆ ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಕರ್ತವ್ಯಲೋಪ ಬಾಡಿವಾರ್ನ್ ಕ್ಯಾಮರಾ ಆಫ್ ಮಾಡಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ಬೈಕ್ ತಡೆದು ಹಣ ವಸೂಲಿ ಮಾಡಿದ್ದ ಆರೋಪ ಸಹ ಕೇಳಿಬಂದಿದೆ. ಇಲಾಖ ತನಿಖೆಯಲ್ಲಿ ಆರೋಪ ಸಾಬೀತು ಹಿನ್ನೆಲೆ ಅಮಾನತು ಮಾಡಲಾಗಿದೆ. ಚಾಲುಕ್ಯ ಸರ್ಕಲ್ ಬಳಿ ಕರ್ತವ್ಯ ವೇಳೆ ಲಂಚ ಸ್ವೀಕರಿಸಿದ್ರು.








