ಬೆಂಗಳೂರು : ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಕಂಡುಬಂದಿರುವ ಟ್ರಫ್ ಮತ್ತು ದಕ್ಷಿಣ ಒಳನಾಡಿನಲ್ಲಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಇಂದಿನಿಂದ ಏಪ್ರಿಲ್ 3ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ 5 ದಿನಗಳವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಬೆಂಗಳೂರಿನಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 5 ದಿನಗಳವರೆಗೆ ಗರಿಷ್ಠ ಉಷ್ಣಾಂಶ 35ರಿಂದ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.








