ಬೆಂಗಳೂರು : ಸಾಂಖ್ಯಿಕ ಮತ್ತು ಅಂಕಿ ಸಂಖ್ಯೆ ಸಚಿವ ಡಿ ಸುಧಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಡಿ ಸುಧಾಕರ್ ಆರೋಗ್ಯದಲ್ಲಿ ಭಾರೀ ವ್ಯತ್ಯಯ ಆಗಿದ್ದು ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ಇಂದು ಏಕಾಏಕಿ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತು. ತಕ್ಷಣ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಯಿತು. ವೈದ್ಯರು ಅವರಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.








