ಬೆಂಗಳೂರು : ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ಇದೀಗ ಬಿಜೆಪಿ ದೂರು ನೀಡಿದೆ. ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದೆ.
ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ದೂರು ಸಲ್ಲಿಕೆಯಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಪ್ರಚಾರದಲ್ಲಿ ಬಿಜೆಪಿ ಕುರಿತು ಪ್ರದೀಪ್ ಈಶ್ವರ್ ನೀಡಿದ್ದ ಹೇಳಿಕೆ ವಿರುದ್ಧ ದೂರು ನೀಡಲಾಗಿದೆ. ಪ್ರಚಾರದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚಂದ್ರಶೇಖರ ಭಾಗಿಯಾಗಿದ್ದ.








