ಬೆಂಗಳೂರು : ಬೆಂಗಳೂರಿನಲ್ಲಿ ಹೋಟೆಲ್ ಸಿಬ್ಬಂದಿ ಮತ್ತು ಯುವಕರ ಮಧ್ಯ ಗಲಾಟೆ ನಡೆದಿದ್ದು ಕೊತ್ತನೂರಿನ ಭಾರತಿ ಸಿರಿಯಫ್ ನಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದೆ. ಹೆಣ್ಣೂರು ಭಾಗದಿಂದ ಬಂದು ಹೋಟೆಲ್ ಬಳಿ ಡ್ರಗ್ಸ್ ಸೇವನೆ ಮಾಡಿರುವ ಆರೋಪ ಕೇಳಿ ಬಂದಿದೆ.
ಸಿರಿಂಜ್ ಮೂಲಕ ಯುವಕರು ಡ್ರಗ್ಸ್ ಇನ್ಜೆಕ್ಟ್ ಮಾಡಿಕೊಳ್ಳುತ್ತಿದ್ದರು. ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಯುವಕರು ಚೇಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬಳಿಕ ಹೋಟೆಲ್ ಸಿಬ್ಬಂದಿಗಳು ಯುವಕರನ್ನು ಪ್ರಶ್ನೆ ಮಾಡಿದ್ದಾರೆ. ಹೋಟೆಲ್ ಗೆ ಬರಬೇಡಿ ಅಂತ ಯುವಕರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಇದರಿಂದ ಕೋಪಗೊಂಡು ಹೋಟೆಲ್ ಸಿಬ್ಬಂದಿ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಬಳಿಕ ಯುವಕರ ಗುಂಪಿನ ಮೇಲು ಕೂಡ ಹೋಟೆಲ್ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ಹೋಟೆಲ್ ನಲ್ಲಿ ಇದ್ದ ಕುರ್ಚಿ ಸೇರಿದಂತೆ ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದಾರೆ. ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.








