Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

01/04/2026 8:21 PM

ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

01/04/2026 8:16 PM

​ಚಂದಿರನತ್ತ ಮತ್ತೆ ಮಾನವನ ಪಯಣ: ನಾಸಾದ ಐತಿಹಾಸಿಕ ‘ಆರ್ಟೆಮಿಸ್-2’ ಮಿಷನ್‌ಗೆ ಕ್ಷಣಗಣನೆ

01/04/2026 8:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ
KARNATAKA

ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

By kannadanewsnow0901/04/2026 8:16 PM

ಬೆಂಗಳೂರು: ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸು ನೀಡುತ್ತಿದೆ. ಇದನ್ನು ‘’ತೆರಿಗೆ ಭಯೋತ್ಪಾದನೆ’’ ಎನ್ನಲೇ? ‘’ತೆರಿಗೆ ದರೋಡೆ’’ ಎನ್ನಲೇ? ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ರೂ.4.50 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್, ಸರ್ ಚಾರ್ಜ್ ಮೂಲಕ ಸಂಗ್ರಹಿಸಿದೆ. ಇದಕ್ಕೆ ಪ್ರತಿಯಾಗಿ ನೀಡಿದ್ದು ರೂ.79,000 ಕೋಟಿ ಮಾತ್ರ. ಕಳೆದ ಮೂರು ವರ್ಷಗಳಲ್ಲಿ ಹಲವಾರು ಬಾರಿ ಈ’ ‘’ತೆರಿಗೆ ದರೋಡೆ’’ಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ದೆಹಲಿಗೆ ಹೋಗಿ ಸಂಸತ್ ಭವನದ ಎದುರಿಗೆ ನಿಂತು ಈ ಅನ್ಯಾಯವನ್ನು ಕೂಗಿಕೂಗಿ ಹೇಳಿದ್ದೇವೆ. ಆಗ ಬಾಯಿ ಮುಚ್ಚಿಕೊಂಡು ಏಳುಕೋಟಿ ಕನ್ನಡಿಗರಿಗೆ ದ್ರೋಹಬಗೆದಿರುವ ಈ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಮೊದಲಾದ ಬಿಜೆಪಿ ನಾಯಕರು ಈಗ ನಮ್ಮ ವಿರುದ್ಧ ಕೂಗು ಹಾಕುತ್ತಿದ್ದಾರೆ ಎಂದಿದ್ದಾರೆ.

ಕರ್ನಾಟಕವು ಜಿಎಸ್‌ಟಿ ಸಂಗ್ರಹದಲ್ಲಿ ಇಂದು ಗಮನಾರ್ಹ ಸಾಧನೆ ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು ಸಾವಿರಾರು ಕೋಟಿ ರೂಪಾಯಿ ಕಳೆದುಕೊಂಡಿದೆ.

15ನೇ ಹಣಕಾಸಿನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ತೆರಿಗೆ ಪಾಲನ್ನು ನೀಡದೆ, ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌‌ಚಾರ್ಜ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡದೆ, ಜಿ.ಎಸ್.ಟಿ ಜಾರಿಯಿಂದ ರಾಜ್ಯಕ್ಕೆ ಆದ ನಷ್ಟವನ್ನು ಸರಿದೂಗಿಸಲು ಪರಿಹಾರ ನೀಡದೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನವನ್ನು ನೀಡದೆ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರವನ್ನು ಸಾಲ ಮಾಡಲೇ ಬೇಕಾದ ಅಸಹಾಯಕ ಪರಿಸ್ಥಿತಿಗೆ ತಳ್ಳಿದೆ.

ತೆರಿಗೆ ಹಂಚಿಕೆ, ಜಿಎಸ್‌ಟಿ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀಡುವ ಅನುದಾನದಲ್ಲಿ ಅನ್ಯಾಯ ಮಾಡದೆ ನಮಗೆ ಸಿಗಬೇಕಾದ ನ್ಯಾಯಬದ್ಧ ಸಂಪನ್ಮೂಲದ ಪಾಲನ್ನು ನೀಡಿದರೆ ಒಂದು ಪೈಸೆ ಸಾಲವನ್ನು ಮಾಡದೆ ರಾಜ್ಯದ ಆರ್ಥಿಕತೆಯನ್ನು ನಿರ್ವಹಿಸುವೆ. ಈ ಸವಾಲನ್ನು ಸ್ವೀಕರಿಸಲು ಬಿಜೆಪಿ ನಾಯಕರು ಸಿದ್ಧರಿದ್ದಾರಾ?

ಮಹಾರಾಷ್ಟ್ರದ ನಂತರ ಕೇಂದ್ರ ಸರ್ಕಾರಕ್ಕೆ ಅತ್ಯಧಿಕ ಪ್ರಮಾಣದ ತೆರಿಗೆ ನೀಡುವ ರಾಜ್ಯ ನಮ್ಮದು. ದೇಶದ ಸಂಪತ್ತಿಗೆ ಕರ್ನಾಟಕವು ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಕೊಡುಗೆಯನ್ನು ನೀಡುತ್ತಲೇ ಬಂದರೂ ಕೇಂದ್ರದಿಂದ ಕರ್ನಾಟಕಕ್ಕೆ ದೊರೆಯಬೇಕಾದ ನ್ಯಾಯಯುತ ಪಾಲಿನಲ್ಲಿ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ.

ನಮ್ಮ ಸರ್ಕಾರ ಮಾಡಿರುವ ಸಾಲವನ್ನು ಅತಿರಂಜಿತವಾಗಿ ಬಣ್ಣಿಸುವ ಬಿಜೆಪಿ ನಾಯಕರಿಗೆ ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯನ ತಲೆ ಮೇಲೆಹೊರಿಸಿರುವ ಸಾಲದ ಹೊರೆ ಕಾಣಿಸುವುದೇ ಇಲ್ಲ. ಸನ್ಮಾನ್ಯ ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿ ಪಟ್ಟಕ್ಕೇರಿದಾಗ ಇದ್ದ ದೇಶದ ಸಾಲದ ಮೊತ್ತ ರೂ.51.06 ಲಕ್ಷ ಕೋಟಿ, 2026-27ನೇ ಸಾಲಿನ ಬಜೆಟ್ ನಲ್ಲಿ ಇದು ರೂ.214 ಲಕ್ಷ ಕೋಟಿಗೆ ಏರಿದೆ. ಈ ಲೆಕ್ಕದ ಪ್ರಕಾರ ಪ್ರತಿಯೊಬ್ಬ ಭಾರತೀಯನ ತಲೆಮೇಲೆ ರೂ.1.50 ಲಕ್ಷದಷ್ಟು ಸಾಲದ ಹೊರೆ ಇದೆ.. ಮೋದಿಯವರ ಸಾಲದ ಹೊರೆ ರಾಜ್ಯದ ಏಳು ಕೋಟಿ ಕನ್ನಡಿಗರ ತಲೆ ಮೇಲೆಯೂ ಇದೆ ಎನ್ನುವುದನ್ನು ಬೊಮ್ಮಾಯಿ ಮತ್ತು ಅಶೋಕ್ ತಿಳಿದುಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇನ್ಫೋಸಿಸ್ ಉದ್ಯೋಗಿ ನೀರುಪಾಲು

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇನ್ಸಪೆಕ್ಟರ್ ಸಂದೇಶ್ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

Share. Facebook Twitter LinkedIn WhatsApp Email

Related Posts

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

01/04/2026 8:21 PM2 Mins Read

ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇನ್ಫೋಸಿಸ್ ಉದ್ಯೋಗಿ ನೀರುಪಾಲು

01/04/2026 7:41 PM1 Min Read

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇನ್ಸಪೆಕ್ಟರ್ ಸಂದೇಶ್ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

01/04/2026 7:28 PM2 Mins Read
Recent News

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

01/04/2026 8:21 PM

ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

01/04/2026 8:16 PM

​ಚಂದಿರನತ್ತ ಮತ್ತೆ ಮಾನವನ ಪಯಣ: ನಾಸಾದ ಐತಿಹಾಸಿಕ ‘ಆರ್ಟೆಮಿಸ್-2’ ಮಿಷನ್‌ಗೆ ಕ್ಷಣಗಣನೆ

01/04/2026 8:14 PM

BREAKING: ವಿಮಾನ ಪ್ರಯಾಣಿಕರಿಗೆ ಶಾಕ್: ವಿಮಾನಯಾನ ದರ ಮತ್ತೆ ಏರಿಕೆ; ಇಂಧನ ಶುಲ್ಕ ಹೆಚ್ಚಳದಿಂದ ಟಿಕೆಟ್ ಬೆಲೆ ದುಬಾರಿ!

01/04/2026 7:59 PM
State News
KARNATAKA

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

By kannadanewsnow0901/04/2026 8:21 PM KARNATAKA 2 Mins Read

ಮೈಸೂರು: 2025–26 ಹಣಕಾಸು ವರ್ಷದಲ್ಲಿ ಮೈಸೂರು ವಿಭಾಗವು ಅತ್ಯುತ್ತಮ ಸಾಧನೆಯನ್ನು ದಾಖಲಿಸಿದ್ದು, ಪ್ರಯಾಣಿಕ, ಸರಕು ಹಾಗೂ ನಾನ್-ಫೇರ್ ಆದಾಯ ವಿಭಾಗಗಳಲ್ಲಿ ಹಲವು…

ಈ ಪ್ರಶ್ನೆಗೆ ರಾಜ್ಯದ ಬಿಜೆಪಿ ನಾಯಕರು ಉತ್ತರಿಸುವ ಧೈರ್ಯ ಮಾಡುತ್ತಾರೆಯೇ?: ಸಿಎಂ ಸಿದ್ಧರಾಮಯ್ಯ

01/04/2026 8:16 PM

ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ಈಜಲು ಹೋಗಿ ಇನ್ಫೋಸಿಸ್ ಉದ್ಯೋಗಿ ನೀರುಪಾಲು

01/04/2026 7:41 PM

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇನ್ಸಪೆಕ್ಟರ್ ಸಂದೇಶ್ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

01/04/2026 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.