Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ವಿದ್ಯಾರ್ಥಿಗಳಲ್ಲಿನ ಮೊಬೈಲ್ ವ್ಯಸನ ತಡೆಗೆ ಮಾರ್ಗಸೂಚಿ : ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ ವಿದ್ಯಾರ್ಥಿಗಳಲ್ಲಿನ ಮೊಬೈಲ್ ವ್ಯಸನ ತಡೆಗೆ ಮಾರ್ಗಸೂಚಿ : ಸಚಿವ ದಿನೇಶ್ ಗುಂಡೂರಾವ್

By kannadanewsnow57

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವ ಮೊಬೈಲ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ವ್ಯಸನವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಸಮಗ್ರ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದು, ಸಾರ್ವಜನಿಕರ ಅಭಿಪ್ರಾಯ ಪಡೆದ ನಂತರ ಅಂತಿಮ ನೀತಿಯನ್ನು ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬುಧವಾರ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನವನ್ನು ಜವಾಬ್ದಾರಿಯಿಂದ ಬಳಸುವಂತೆ ಮಾಡಲು ಶಿಕ್ಷಕರಿಗೆ ತರಬೇತಿ, ಪೋಷಕರಲ್ಲಿ ಜಾಗೃತಿ ಮತ್ತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕರಡು ನೀತಿಯನ್ನು ರೂಪಿಸಲಾಗಿದೆ ಎಂದರು.

ಆರೋಗ್ಯ ಇಲಾಖೆ, ಪ್ರಾಥಮಿಕ ಶಿಕ್ಷಣ ಇಲಾಖೆ ಮತ್ತು ನಿಮ್ಹಾನ್ಸ್ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಅಧ್ಯಯನದ ಪ್ರಕಾರ, ಶಾಲಾ-ಕಾಲೇಜುಗಳಲ್ಲಿನ ಪ್ರತಿ ನಾಲ್ವರು ವಿದ್ಯಾರ್ಥಿಗಳಲ್ಲಿ ಒಬ್ಬರು ಡಿಜಿಟಲ್ ಸಂವಹನ ಅಥವಾ ಮೊಬೈಲ್ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡುಬಂದಿದೆ.

ದುಷ್ಪರಿಣಾಮಗಳು

ಅತಿಯಾದ ಡಿಜಿಟಲ್ ಬಳಕೆಯಿಂದ ಮಕ್ಕಳಲ್ಲಿ ಉದ್ವೇಗ, ನಿದ್ರಾಹೀನತೆ, ಏಕಾಗ್ರತೆಯ ಕೊರತೆ ಮತ್ತು ಸಾಮಾಜಿಕವಾಗಿ ಪ್ರತ್ಯೇಕವಾಗಿರುವ (Isolation) ಮನೋಭಾವ ಬೆಳೆಯುತ್ತಿದೆ ಎಂದು ಅಧ್ಯಯನವು ಎಚ್ಚರಿಸಿದೆ.ಆರಂಭಿಕ ಹಂತದಲ್ಲೇ ಮಕ್ಕಳಲ್ಲಿ ಕಂಡುಬರುವ ಡಿಜಿಟಲ್ ವ್ಯಸನದ ಲಕ್ಷಣಗಳನ್ನು ಪತ್ತೆಹಚ್ಚಿ, ಅವರಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರ ಅಭಿಪ್ರಾಯಕ್ಕೆ ಮುಕ್ತ ಅವಕಾಶ

ಸರ್ಕಾರ ಸಿದ್ಧಪಡಿಸಿರುವ ಈ ಕರಡು ನೀತಿಯು ಆರೋಗ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಸಾರ್ವಜನಿಕರು, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಸಲಹೆಗಳನ್ನು ನೀಡಲು ಕೋರಲಾಗಿದೆ.
ವೆಬ್‌ಸೈಟ್: hfwcom.karnataka.gov.in
ಇ-ಮೇಲ್ ವಿಳಾಸಗಳು: dd6mhkar@gmail.com, ddehospital&hfws@karnataka.gov.in
ಗಡುವು: ಸಾರ್ವಜನಿಕರು ಮುಂದಿನ 15 ದಿನಗಳ ಒಳಗಾಗಿ ತಮ್ಮ ಅಭಿಪ್ರಾಯ ಮತ್ತು ಸೂಚನೆಗಳನ್ನು ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ.

ಸಾರ್ವಜನಿಕರಿಂದ ಬರುವ ಸಲಹೆಗಳನ್ನು ಪರಿಶೀಲಿಸಿ, ವೈಜ್ಞಾನಿಕವಾಗಿ ಚರ್ಚಿಸಿ ಶೀಘ್ರದಲ್ಲೇ ಅಂತಿಮ ಮಾರ್ಗಸೂಚಿಯನ್ನು ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Guidelines to prevent mobile phone addiction among students in the state: Minister Dinesh Gundu Rao
Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.