ಚಿಕ್ಕಮಗಳೂರು : ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು, NR ಪುರ, ಮೂಡಿಗೆರೆ, ಕೊಪ್ಪ ಭಾಗದಲ್ಲಿ ಮಳೆ ಸುರಿಯುತ್ತಿದೆ. ಕಳೆದ 1 ಗಂಟೆಯಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಾಗಾಗಿ ವಾಹನಗಳು ರಸ್ತೆಯಲ್ಲಿಯೇ ನಿಂತಿದ್ದು ಸವಾರರು ಪರದಾಡುತ್ತಿದ್ದಾರೆ.








