ತೆಹ್ರಾನ್:ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಈಗ ನೇರವಾಗಿ ಹಸ್ತಕ್ಷೇಪ ಮಾಡಿದೆ. ಇರಾನ್‌ನ ಹೆಮ್ಮೆಯ ಪ್ರತೀಕವಾಗಿದ್ದ ಮತ್ತು ದೇಶದ ಅತ್ಯಂತ ಎತ್ತರದ ಸೇತುವೆ ಎಂದು ಗುರುತಿಸಲ್ಪಟ್ಟಿದ್ದ ಆಯಕಟ್ಟಿನ ಸೇತುವೆಯ ಮೇಲೆ ಅಮೆರಿಕದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿವೆ. ಈ ಭೀಕರ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇರಾನ್‌ನ ಸೇನಾ ಸರಬರಾಜು ಮತ್ತು ಇಂಧನ ಸಾಗಾಣಿಕೆಗೆ ಪ್ರಮುಖ ಕೊಂಡಿಯಾಗಿದ್ದ ಈ ಬೃಹತ್ ಸೇತುವೆಯನ್ನು ಗುರಿಯಾಗಿಸಿ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಸೇತುವೆಯು ಸಂಪೂರ್ಣವಾಗಿ ನೆಲಸಮವಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ.








