ಕಲಬುರ್ಗಿ : ಭೀಮ ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಂದನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಾಲಸಾಬ್ ಪಟೇಲ್ (19) ಸಾವನಪ್ಪಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದಾಗ ಈ ದುರಂತ ಸಂಭವಿಸಿದೆ. ಘಟನೆ ಕುರಿತಂತೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








