ದಾವಣಗೆರೆ : ಹುಬ್ಬಳ್ಳಿಯಲ್ಲಿ ಜಿಮ್‌ಟ್ರೈನರ್ ಮತ್ತು ಯುವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದು ಗೃಹ ಸಚಿವಾಚಿ ಪರಮೇಶ್ವರ್ ತಿಳಿಸಿದರು.
ದಾವಣಗೆರೆಯಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಹುಬ್ಬಳ್ಳಿಗೆ ಹೊರಟಿದ್ದೇನೆ, ಬರುವುದರೊಳಗೆ ವರದಿ ನೀಡಿ ಎಂದಿದ್ದೇನೆ. ಈ ಪ್ರಕರಣದ ಬಗ್ಗೆ ಎಲ್ಲ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಇಂತಹ ಕೇಸ್ಗಳಲ್ಲಿ ಕಠಿಣ ಕ್ರಮ ಇರುತ್ತದೆ ಎಂದರು.








