ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೆನ್ನೂರಲ್ಲಿ ನಡೆದಿದೆ.
ವಿದ್ಯುತ್ ಪ್ರವಹಿಸಿ ಅಭಿಷೇಕ ತೆವರಿ (22) ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಹೊಸ ಮನೆಯಲ್ಲಿ ಫ್ಯಾನ್ ಅಳವಡಿಸುವ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








