Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರಿಗೆ ಹಳೆಯ ‘ಹೃದಯ’ ಪರೀಕ್ಷೆಗಳೇ ಕಂಟಕ: ಶೇ. 80ರಷ್ಟು ರೋಗಿಗಳ ಅಪಾಯ ಪತ್ತೆಹಚ್ಚುವಲ್ಲಿ ವಿಫಲವಾದ ಜಾಗತಿಕ ಮಾದರಿಗಳು!

04/04/2026 7:55 PM

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM

ಟ್ರಂಪ್ ವಿಜಯ ಘೋಷಣೆ ಬೆನ್ನಲ್ಲೇ ಅಮೆರಿಕಕ್ಕೆ ಶಾಕ್: 48 ಗಂಟೆಗಳಲ್ಲಿ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಇರಾನ್

04/04/2026 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್
KARNATAKA

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

By kannadanewsnow0904/04/2026 7:55 PM

ಕಾರವಾರ : ಮಾಹಿತಿ ಹಕ್ಕು ಕಾಯಿದೆ ಯಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು.

ಅವರು ಶನಿವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಹಿತಿ ಹಕ್ಕು ಕಾಯಿದೆಯು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಕಾನೂನಾತ್ಮಕವಾಗಿ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಹಕಾರಿಯಾಗಿದ್ದು,ಇದು ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಣೆ ಮಾಡುವ ಕಾಯಿದೆಯಾಗಿ ಬದಲಾಗಿದೆ , ಅಧಿಕಾರಿಗಳು ಪ್ರಾಮಾಣಿಕವಾಗಿ ತಪ್ಪುಗಳನ್ನು ಮಾಡದಂತೆ ಕೆಲಸ ನಿರ್ವಹಿಸಲು ಕಾಯ್ದೆ ಸಹಕಾರಿಯಾಗಿದೆ ಎಂದರು.

ಕಾಯಿದೆಯ ಕುರಿತಂತೆ ಅಗಿಂದಾಗ್ಗೆ ಸರ್ವೋಚ್ಚ ನ್ಯಾಯಾಲಯ, ಹೈಕೋರ್ಟ್ ನೀಡುವ ತೀರ್ಪುಗಳ ಕುರಿತಂತೆ ಮಾಹಿತಿ ಅಧಿಕಾರಿಗಳು ಅರಿವು ಹೊಂದಿರಬೇಕು, ಕಾಯಿದೆಯಲ್ಲಿನ ಎಲ್ಲಾ ಅಂಶಗಳ ಬಗ್ಗೆ ಸಮಗ್ರವಾಗಿ ಅರಿತುಕೊಂಡು ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸಬೇಕು. ಪ್ರಥಮ ಮೇಲ್ಮನವಿ ಮತ್ತು ಎರಡನೇ ಮೆಲ್ಮನವಿಗಳ ಸಲ್ಲಿಕೆಗೆ ಅವಕಾಶ ನೀಡದೇ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇಗೊಳಿಸಬೇಕು. ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸದ ಅಧಿಕಾರಿಗಳಿಗೆ ರೂ.25000 ಗಳವರೆಗೆ ದಂಡ ಮತ್ತು ಕರ್ತವ್ಯ ಲೋಪದಡಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವ ಅಧಿಕಾರ ಆಯೋಗಕ್ಕಿದೆ ಎಂದರು.

ಸಾರ್ವಜನಿಕರಿಗೆ ಶೀಘ್ರದಲ್ಲಿ ಮತ್ತು ಸಮರ್ಪಕವಾದ ಮಾಹಿತಿ ನೀಡಲು ಅನುಕೂಲವಾಗುವಂತೆ ಕಚೇರಿಗಳಲ್ಲಿ ಕಡತಗಳನ್ನು ವರ್ಗಿಕರಣ ಮಾಡಿಟ್ಟುಕೊಳ್ಳಬೇಕು, ಕಡತಗಳನ್ನು ನಿಯಮಾನುಸಾರ ನಾಶಪಡಿಸಿದ್ದರೆ ಈ ಬಗ್ಗೆ ದಾಖಲೆ ಇರಬೇಕು, ಕಡತಗಳು ಕಣ್ಮರೆಯಾಗಿದ್ದಲ್ಲಿ ಎಫ್.ಐ.ಆರ್ ದಾಖಲಿಸಬೇಕು ಇಲ್ಲವಾದಲ್ಲಿ ಸಂಬಂದ ಪಟ್ಟ ಅಧಿಕಾರಿಯ ವಿರುದ್ದವೇ ಶಿಕ್ಷೆ ವಿಧಿಸಬಹುದಾಗಿದೆ ಎಂದು ತಿಳಿಸಿದರು.

ಮಾಹಿತಿ ಹಕ್ಕು ಕಾಯಿದೆಯ ವಿವಿಧ ಸೆಕ್ಷನ್‌ಗಳಡಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾದ ಕಾರ್ಯಗಳ ಕುರಿತು ವಿವರವಾದ ಮಾಹಿತಿ ನೀಡಿದ ಅವರು ಕಾಯಿದೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದ ಅವರು ಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮತ್ತು ಮೇಲ್ಮನವಿ ಅಧಿಕಾರಿಗಳ ವಿವರಗಳನ್ನು ಹಾಗೂ ಸೆಕ್ಷನ್ 4 (1)ಎ ಮತ್ತು 4 (1)ಬಿ ಮಾಹಿತಿಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಸೂಚಿಸಿದರು.

ಮಾಹಿತಿ ಆಯುಕ್ತ ನಾರಾಯಣ ಚನ್ನಾಳ, ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಇದ್ದರು.

ನಂತರ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂವಾದ ಚರ್ಚೆ ನಡೆಯಿತು.

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

04/04/2026 7:43 PM3 Mins Read

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.9,10 ರಂದು `ಸಮುದಾಯದತ್ತ ಶಾಲೆ’ ಕಾರ್ಯಕ್ರಮ ಆಯೋಜನೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

04/04/2026 7:39 PM2 Mins Read

BIG BREAKING: ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

04/04/2026 7:36 PM1 Min Read
Recent News

ಭಾರತೀಯರಿಗೆ ಹಳೆಯ ‘ಹೃದಯ’ ಪರೀಕ್ಷೆಗಳೇ ಕಂಟಕ: ಶೇ. 80ರಷ್ಟು ರೋಗಿಗಳ ಅಪಾಯ ಪತ್ತೆಹಚ್ಚುವಲ್ಲಿ ವಿಫಲವಾದ ಜಾಗತಿಕ ಮಾದರಿಗಳು!

04/04/2026 7:55 PM

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

04/04/2026 7:55 PM

ಟ್ರಂಪ್ ವಿಜಯ ಘೋಷಣೆ ಬೆನ್ನಲ್ಲೇ ಅಮೆರಿಕಕ್ಕೆ ಶಾಕ್: 48 ಗಂಟೆಗಳಲ್ಲಿ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಇರಾನ್

04/04/2026 7:50 PM

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

04/04/2026 7:43 PM
State News
KARNATAKA

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಆಯುಕ್ತ ಡಾ.ಹರೀಶ್ ಕುಮಾರ್

By kannadanewsnow0904/04/2026 7:55 PM KARNATAKA 2 Mins Read

ಕಾರವಾರ : ಮಾಹಿತಿ ಹಕ್ಕು ಕಾಯಿದೆ ಯಡಿ ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಅಗತ್ಯ ಮಾಹಿತಿ…

ಹೀಗಿವೆ 2027ರ ‘ಜನಗಣತಿ’ಯ ವೇಳೆಯಲ್ಲಿ ನಿಮಗೆ ಕೇಳುವಂತ ’33 ಪ್ರಶ್ನೆ’ಗಳು | Census-2027

04/04/2026 7:43 PM

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.9,10 ರಂದು `ಸಮುದಾಯದತ್ತ ಶಾಲೆ’ ಕಾರ್ಯಕ್ರಮ ಆಯೋಜನೆ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ

04/04/2026 7:39 PM

BIG BREAKING: ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

04/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.