Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ
KARNATAKA

ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳ 60 ತಾಲ್ಲೂಕುಗಳಲ್ಲಿನ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇವುಗಳ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್‌ಗಳ ಮುಖಾಂತರ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ತುರ್ತು ಕಾಮಗಾರಿಗಳನ್ನು ನಿರ್ವಹಿಸಲು ಈಗಾಗಲೇ 60 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದು, ಮಾರ್ಚ್ 2026ರಲ್ಲಿ ಟಾಸ್ಕ್ ಫೋರ್ಸ್ನಡಿ ಮುಂದುವರೆದ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಹೆಚ್ಚುವರಿಯಾಗಿ 48 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ ಹಾಗೂ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ 14.50 ಕೋಟಿ ರೂ.ಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಬೇಸಿಗೆ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ನಿರಾತಂಕವಾಗಿರಬೇಕೆಂಬ ನಿಟ್ಟಿನಲ್ಲಿ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅಧಿಕಾರಿಗಳು ನಿರಂತರವಾಗಿ ನಿಗಾ ಇರಿಸಿದ್ದು ಪರಿಶೀಲನ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಆದ್ಯತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಗ್ರಾಮೀಣ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುದ್ಧ ಕುಡಿಯುವ ನೀರು ಸರಬರಾಜು ಜೊತೆಗೆ ಬೇಸಿಗೆ ಕಾಲವನ್ನು ಗಮನದಲ್ಲಿಟುಕೊಂಡು ಗ್ರಾಮಗಳು ಹಾಗೂ ಜನವಸತಿ ಪ್ರದೇಶಗಳಲ್ಲಿನ ಎಲ್ಲಾ ಕುಡಿಯುವ ನೀರಿನ ಮೂಲಗಳ ಸಂಭಾವ್ಯ ಗುಣಮಟ್ಟದ ಪರೀಕ್ಷೆಗಳನ್ನು ಕ್ಷೇತ್ರ ಪ್ರಯೋಗ ಉಪಕರಣಗಳ ಮೂಲಕ ನಡೆಸಲಾಗುತ್ತಿದೆ, ನೀರಿನ ಮಾದರಿಯು ಅನುಮತಿಸಬಹುದಾದ ಮಿತಿಗಿಂತ ಹೆಚ್ಚಾಗಿರುವುದು ಕಂಡುಬಂದ ಪ್ರಕರಣಗಳಲ್ಲಿ ನೀರಿನ ಮಾದರಿಗಳನ್ನು ಹತ್ತಿರದ ಪ್ರಯೋಗಾಲಯಗಳಲ್ಲಿ ಮರುಪರೀಕ್ಷೆಗೆ ಒಳಪಡಿಸಿ ಗುಣಮಟ್ಟವನ್ನು ಖಚಿತಪಡಿಸಿಕೊಂಡು ಕಲುಷಿತ ನೀರಿಗೆ ಪರ್ಯಾಯವಾಗಿ ಇತರೆ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದ್ದಾರೆ.

ರಾಜ್ಯದ 31 ಜಿಲ್ಲೆಗಳಲ್ಲಿ 26,676 ಗ್ರಾಮಗಳಿದ್ದು, 57,883 ಜನವಸತಿ ಪ್ರದೇಶಗಳಲ್ಲಿ 1,01,30,798 ಮನೆಗಳು ಇರುತ್ತವೆ, ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಹಲವು ಜಲಮೂಲಗಳು ಬತ್ತಿಹೋಗುವುದರಿಂದ ಹಾಗೂ ಕೊಳವೆ ಬಾವಿಗಳ ಇಳುವರಿ ಕಡಿಮೆಯಾಗುತ್ತಿರುವುದರಿಂದ ಕೆಲವೊಂದು ಜನವಸತಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುತ್ತದೆ. ಈ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮವಹಿಸಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ತುರ್ತಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಂಡು ಕುಡಿಯುವ ನೀರನ್ನು ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದೂ ಸಚಿವರು ವಿವರಗಳನ್ನು ನೀಡಿದ್ದಾರೆ.

ಈಗಾಗಲೆ ನೀಡಿರುವ ನಿರ್ದೇಶನದಂತೆ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದು, ಅಗತ್ಯವಿದ್ದಲ್ಲಿ, ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡಲಾಗುವುದು, ಕೊಳವೆ ಬಾವಿಗಳನ್ನು ಫ್ಲಶಿಂಗ್‌ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು, ಅನಿವಾರ್ಯ ಸಂದರ್ಭಗಳಲ್ಲಿ ಕೊಳವೆಬಾವಿಗಳನ್ನು ಕೊರೆಯುವುದು ಅತ್ಯಗತ್ಯವೆಂದು ಕಂಡು ಬಂದಲ್ಲಿ ಮಾತ್ರ ಸಂಬಂಧಪಟ್ಟ ಜಿಯಾಲಜಿಸ್ಟ್‌ ವರದಿಯನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ಪ್ರತಿ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಗಳ (PDO) ಜೊತೆಯಲ್ಲಿ ಜಿ.ಪಂ ಸಿಇಒಗಳು ಸಭೆ ನಡೆಸುತ್ತಿದ್ದಾರೆ, ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ 24/7 ಕಂಟ್ರೋಲ್‌ ರೂಮ್‌ ತೆರೆಯಲಾಗಿದೆ, ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆ (Rapid taskforce)ಯನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

2 Mins Read

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

2 Mins Read

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

1 Min Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

RBI ಎಚ್ಚರಿಕೆ: ಹಣದ ಆಸೆಗೆ ನಿಮ್ಮ `ಬ್ಯಾಂಕ್ ಖಾತೆ’ ಬೇರೆಯವರಿಗೆ ನೀಡಿದರೆ ಜೈಲು ಶಿಕ್ಷೆ ಫಿಕ್ಸ್.!

State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ ಸಾಕು ಸಿಗಲಿದೆ ಸರ್ಕಾರದ ಈ ಎಲ್ಲಾ ಸೌಲಭ್ಯಗಳು.!

By kannadanewsnow57 KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ ಬದಲು ಚಪ್ಪಲಿ ವಿತರಣೆಗೆ ಚಿಂತನೆ.!

ವಿದ್ಯಾರ್ಥಿಗಳೇ ನಿಮ್ಮ `TC’ ಕಳೆದುಹೋಗಿದೆಯೇ? ಚಿಂತೆಬೇಡ, ಈ ದಾಖಲೆಗಳಿದ್ದರೆ ಡುಪ್ಲಿಕೇಟ್ ಪಡೆಯಬಹುದು.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಕೆಲಸದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.