ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ಒಂದು ನಡೆಸಿದ್ದು, ಜೂಜು ಆಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 19 ಜೂಜು ಕೋರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಲ್ಲದೇ ಜೂಜಾಟದ ಸ್ಥಳದಲ್ಲಿ 9 ಲಕ್ಷದ 22 ಸಾವಿರ ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ 15 ಮೊಬೈಲ್ ಫೋನ್ ಗಳು ಹಾಗೂ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ 19 ಆರೋಪಿಗಳನ್ನು ಇದೀಗ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.







