ಬೆಂಗಳೂರು : ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ತೃತೀಯ ಭಾಷೆ ಹಿಂದಿಗೆ ಅಂಕ ಕಟ್ ಮಾಡಿದಕ್ಕೆ ರಾಜ್ಯಪಾಲರು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆ ಖಂಡಿಸಿ ಕನ್ನಡ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು. ರಾಜ್ಯಪಾಲರಿಂದ ಆಕ್ಷೇಪಣೆ ಪತ್ರ ಬಂದಿದ್ದು, ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು. ತೃತೀಯ ಭಾಷೆಯ ಅಂಕ ಕೈಬಿಟ್ಟಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಖಂಡಿಸಿ ಇಂದು ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.








