ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. 16 ಕ್ಕೂ ಅಧಿಕ ಜಿಲ್ಲೆಗಳಿಗೆ ಏಪ್ರಿಲ್ 6 ರಿಂದ 9 ರವರೆಗೂ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಏಪ್ರಿಲ್ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 8ರ ತನಕ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.








