Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎತ್ತರದ ಪ್ರದೇಶಗಳಲ್ಲಿ ವಾಸಿಸುವವರಿಗೆ ಮಧುಮೇಹದ ಅಪಾಯ ಕಡಿಮೆ! ವಿಜ್ಞಾನಿಗಳ ಹೊಸ ಸಂಶೋಧನೆಯಲ್ಲಿ ಬಯಲಾಯ್ತು ಅಸಲಿ ಕಾರಣ

06/04/2026 7:47 PM

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

06/04/2026 7:23 PM

BREAKING: ಜಯರಾಜ್-ಬೆನಿಕ್ಸ್ ಲಾಕಪ್ ಡೆತ್ ಕೇಸ್: ತಮಿಳುನಾಡಿನ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ!

06/04/2026 7:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ
KARNATAKA

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

By kannadanewsnow0906/04/2026 7:23 PM

ದಾವಣಗೆರೆ: ನಾವು ಮಾಡಿದ ಜನಪರ ಕೆಲಸಗಳ, ಅಭಿವೃದ್ದಿ ಕೆಲಸಗಳ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಆದರೆ, ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ, ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಭಾರೀ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಆರು ಬಾರಿ ಶಾದಕರಾಗಿದ್ದ ಶಾಮನೂರು‌ ಶಿವಶಂಕರಪ್ಪ ಅವರು ಇದೇ ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳು ಸರಾಗವಾಗಿ ಮುಂದುವರೆಯಲು ಸಮರ್ಥ್ ಶಾಮನೂರು ಅವರನ್ನು ಸಮರ್ಥವಾಗಿ ಗೆಲ್ಲಿಸಿ ಮುನ್ನಡೆಸಿ ಎಂದು ಮನವಿ ಮಾಡಿದರು.

ಒಂಬತ್ತು ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಅಭಿವೃದ್ಧಿ ಮಾಡಲಿಲ್ಲ. ಹೀಗಾಗಿ ತಾವು ಮಾಡಿದ ಕೆಲಸಗಳ ಆಧಾರದಲ್ಲಿ ಮತ ಕೇಳಲು ಸಾಧ್ಯವಾಗದೆ ನನಗೆ ಬಯ್ಯುತ್ತಾ ಮತ ಕೇಳುತ್ತಿದ್ದಾರೆ. ನಾನು ದುರ್ಬಲರ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ ಎನ್ನುವ ಕಾರಣದಿಂದಲೇ ನನ್ನನ್ನು ಬೈಯ್ದು ಓಟು ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಎಲ್ಲಾ ಜಾತಿ, ಧರ್ಮದವರನ್ನೂ ಜೊತೆಗೆ ಕೊಂಡೊಯ್ಯುವ ಪಕ್ಷ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಭಜನೆ ತಂದು ಓಟು ಕೇಳುವ ಕೆಟ್ಟ ರಾಜಕಾರಣವನ್ನು ನಾವು ಮಾಡುವುದಿಲ್ಲ. ಕೋಮುಗಲಭೆಗಳನ್ನು ಸಂಘಟಿಸಿ ರಾಜಕಾರಣ ಮಾಡುವುದು ಬಿಜೆಪಿಯ ಜಾಯಮಾನ ಎಂದರು.

ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರು 25ಸಾವಿರ ಕೋಟಿ ಹಣ ಲೂಟಿ ಮಾಡಿರುವ ಭ್ರಷ್ಟರು ಎಂದು ಬಿಜೆಪಿಯವರೇ ಆಗಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರೇ ನೇರವಾಗಿ ಆರೋಪಿಸಿದ್ದಾರೆ. ಈ ಯಡಿಯೂರಪ್ಪ ಮತ್ತು ವಿಜಯೇಂದ್ರ ನಾಚಿಕೆ ಬಿಟ್ಟು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ.ಮೇಟಿ ಇಬ್ಬರೂ ಪ್ರಾಮಾಣಿಕ ನಾಯಕರು. ಇವರಿಬ್ಬರ ನಿಧನದಿಂದ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಗೆಲ್ಲುವುದು ಶತಸಿದ್ದ ಎಂದು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ನುಡಿದಂತೆ ನಡೆದು‌, ಕೊಟ್ಟ ಭರವಸೆಗಳನ್ನು ಈಡೇರಿಸಿ ನಿಮ್ಮ ಮುಂದೆ ನಿಂತಿದ್ದೇವೆ. ಕೆಲಸ ಮಾಡಿ ಬಂದು ನಿಮ್ಮಿಂದ ಅಭಿವೃದ್ಧಿ ಪರವಾಗಿ ಮತ ಕೇಳುತ್ತಿದ್ದೇವೆ. ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಈ ಕಾರಣದಿಂದ ನಮ್ಮ ಕೆಲಸಕ್ಕೆ ಕೈ ಹಿಡಿದು ಸಹಕರಿಸಿ ಎಂದರು.

Share. Facebook Twitter LinkedIn WhatsApp Email

Related Posts

BIG BREAKING: ವಾಹನ ಸವಾರರಿಗೆ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಹೆಚ್ಚಳ

06/04/2026 7:15 PM1 Min Read

ಬೇಸಿಗೆ ದಟ್ಟಣೆ: ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಅವಧಿ ವಿಸ್ತರಣೆ

06/04/2026 7:08 PM1 Min Read

ಕೇಂದ್ರದ ಬಿಜೆಪಿ ಸರ್ಕಾರ ‘ಬಾಕಿ ಸರ್ಕಾರ’; ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲುಣಿಸಿ: ಕಾಂಗ್ರೆಸ್ MLC ಮಂಜುನಾಥ್ ಭಂಡಾರಿ ಕರೆ

06/04/2026 7:05 PM2 Mins Read
Recent News

ಎತ್ತರದ ಪ್ರದೇಶಗಳಲ್ಲಿ ವಾಸಿಸುವವರಿಗೆ ಮಧುಮೇಹದ ಅಪಾಯ ಕಡಿಮೆ! ವಿಜ್ಞಾನಿಗಳ ಹೊಸ ಸಂಶೋಧನೆಯಲ್ಲಿ ಬಯಲಾಯ್ತು ಅಸಲಿ ಕಾರಣ

06/04/2026 7:47 PM

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

06/04/2026 7:23 PM

BREAKING: ಜಯರಾಜ್-ಬೆನಿಕ್ಸ್ ಲಾಕಪ್ ಡೆತ್ ಕೇಸ್: ತಮಿಳುನಾಡಿನ 9 ಮಂದಿ ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ!

06/04/2026 7:20 PM

BIG BREAKING: ವಾಹನ ಸವಾರರಿಗೆ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಹೆಚ್ಚಳ

06/04/2026 7:15 PM
State News
KARNATAKA

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

By kannadanewsnow0906/04/2026 7:23 PM KARNATAKA 2 Mins Read

ದಾವಣಗೆರೆ: ನಾವು ಮಾಡಿದ ಜನಪರ ಕೆಲಸಗಳ, ಅಭಿವೃದ್ದಿ ಕೆಲಸಗಳ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಆದರೆ, ನನಗೆ ಬೈದು ಮತ ಕೇಳುವ…

BIG BREAKING: ವಾಹನ ಸವಾರರಿಗೆ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಹೆಚ್ಚಳ

06/04/2026 7:15 PM

ಬೇಸಿಗೆ ದಟ್ಟಣೆ: ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಅವಧಿ ವಿಸ್ತರಣೆ

06/04/2026 7:08 PM

ಕೇಂದ್ರದ ಬಿಜೆಪಿ ಸರ್ಕಾರ ‘ಬಾಕಿ ಸರ್ಕಾರ’; ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲುಣಿಸಿ: ಕಾಂಗ್ರೆಸ್ MLC ಮಂಜುನಾಥ್ ಭಂಡಾರಿ ಕರೆ

06/04/2026 7:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.