ಬಾಗಲಕೋಟೆ : ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯ ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಬಹಿರಂಗವಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರು ವಿಶ್ವಾಸದ್ರೋಹಿ ಎಂದು ಯಡಿಯೂರಪ್ಪ ಮಾಡಿದ ಆರೋಪದ ಬಗ್ಗೆ ನವನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎನ್ನುವುದನ್ನು ಉಲ್ಲೇಖಿಸಿ ಯಡಿಯೂರಪ್ಪ ಅವರು ಆರೋಪ ಮಾಡಬೇಕು. ಅರಳು ಮರಳು ಯಡಿಯೂರಪ್ಪ ಅವರು ಆಧಾರ ಸಹಿತವಾಗಿ ಮಾತನಾಡಬೇಕು ಎಂದರು.
ತಮ್ಮ ಜಾತಿಯ ಅಭ್ಯರ್ಥಿ ಆದ ಕಾರಣ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಠಿಕಾಣಿ ಹೂಡಿದ್ದಾರೆ ಎನ್ನುವ ಯಡಿಯೂರಪ್ಪ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಅಲ್ಲೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದೇನೆ. ಅವರು ಯಾವ ಜಾತಿ ? ಎಂದು ಪ್ರಶ್ನಿಸಿದರು.
ನಾವು ಜಾತಿ ಕಾರಣಕ್ಕೆ ಪ್ರಚಾರ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀವಿ ಎಂದರು.
ಮುಖ್ಯಮಂತ್ರಿ ಯಾರಾಗಿರಬೇಕು ಎನ್ನುವ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಅಸಂಸದೀಯ ಪದ ಬಳಸಿರುವುದು ಪ್ರತಾಪ್ ಸಿಂಹ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ಎರಡೂ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮಗೆ ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗಿದೆ. ಎರಡೂ ಕಡೆ ಗೆಲ್ತೀವಿ ಎಂದರು.
ಶಿವಮೊಗ್ಗದಲ್ಲಿ ಆರೋಗ್ಯ ಕ್ರಾಂತಿ: ‘ರಾಯಲ್ ಫಿಟ್‌ನೆಸ್ ಸ್ಟುಡಿಯೋ’ ಮೂಲಕ ನಿಮ್ಮ ಫಿಟ್‌ನೆಸ್ ಕನಸು ನನಸು!








