ಕಲಬುರ್ಗಿ : ಕಲಬುರಗಿಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಅರೆಬೆಂದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿಯಾಗಿದ್ದು, ಕೊಟ್ಟ ಹಣವನ್ನು ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಶಿಕ್ಷಕಿಯ ಕೊಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು, ನಂತರ ಮೃತ ದೇಹವನ್ನು ಆರೋಪಿ ಸುಟ್ಟು ಹಾಕಿದ್ದಾನೆ ಎಂದು ತನಿಖೆ ವೇಳೆ ಬಯಲಾಗಿದೆ.
ಕೊಲೆಯಾದ ಮಹಿಳೆ ಶಾಲಾ ಶಿಕ್ಷಕಿ ಜ್ಯೋತಿ ಕಪಾಳೆ ಹಿರೇಮಠ(57) ಎಂಬುದು ಗೊತ್ತಾಗಿದ್ದು, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಪರಿಚಯಸ್ಥ ವ್ಯಕ್ತಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಶಿಕ್ಷಕಿಯ ಮೃತ ದೇಹವನ್ನು ಸುಟ್ಟು ಹಾಕಿರೋದು ಹೊತ್ತಾಗಿದೆ. ಪ್ರಕರಣ ಸಂಬಂಧ ಆರೋಪಿ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಜ್ಯೋತಿ ಕಪಾಳೆ ಹಿರೇಮಠ ಕೆಲಸ ಮಾಡುತ್ತಿದ್ದರು.
ಹೀಗಾಗಿ ಬೀದರ್ನಲ್ಲಿಯೇ ಮನೆ ಮಾಡಿಕೊಂಡು ಶಾಲೆಗೆ ಹೋಗಿ ಬರುತ್ತಿದ್ದರು. ಆದರೆ ವಾರಕೊಮ್ಮೆ ಕಲಬುರಗಿಗೆ ಬಂದು ವಾಪಸ್ ತೆರಳುವ ಅಭ್ಯಾಸ ಅವರಿಗೆ ಇತ್ತು. ಹೀಗೆ ಬಂದವರು ಕಲಬುರಗಿಯಿಂದ ಬೀದರ್ಗೆ ತೆರಳುವಾಗ ಆರೋಪಿ ಕೊಲೆಗೈದಿದ್ದಾನೆ. ಶಿಕ್ಷಕಿ ಜ್ಯೋತಿಗೆ ಪರಿಚಯಸ್ಥನಾಗಿದ್ದ ಆರೊಪಿ, ಅವರಿಂದ 14 ಲಕ್ಷ ಹಣ ಪಡೆದಿದ್ದ. ಕೊಟ್ಟ ಈ ಹಣವನ್ನು ಜ್ಯೋತಿ ವಾಪಸ್ ಕೇಳಿರುವುದೇ ಕೊಲೆಗೆ ಕಾರಣವಾಗಿದೆ.








