ಧಾರವಾಡ : ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ಜಿಮ್ ಟ್ರೈನರ್ ನಿಂದಲೇ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮೀರ್ ಮುಲ್ಲಾನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅದಾದ ಬಳಿಕ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಿಗಿರುವ ಆರೋಪದ ಮೇಲೆ ಮುಫಿಸ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು.
ಇದೀಗ ಧಾರವಾಡದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ. ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ.
ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ ಬೀಗ ಹಾಕಿದ್ದರು. ದ್ಯ ಆರೋಪಿ ಸಾಬೀರ್‌ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.








