Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಚುನಾವಣಾ ಆಯೋಗದಿಂದ ಇಬ್ಬಗೆಯ ನೀತಿ: ಸಿಎಂ ಸಿದ್ಧರಾಮಯ್ಯ ಕಿಡಿಕಿಡಿ

By kannadanewsnow0908/04/2026 6:57 PM

ಬೆಂಗಳೂರು: ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ ಎಂದಿದ್ದಾರೆ.

ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ. ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ ಎಂಬುದಾಗಿ ತಿಳಿಸಿದ್ದಾರೆ.

ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು “ಬಿಟ್ಟಿ ಭಾಗ್ಯ” ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನವಹಿಸಿತ್ತು, ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು ಎಂದು ಹೇಳಿದ್ದಾರೆ.

ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ – ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ. ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಭಾರತದ ಸ್ವಾಗತ: ಹೊರ್ಮುಜ್ ಜಲಸಂಧಿಯಲ್ಲಿ ಅಡೆತಡೆಯಿಲ್ಲದ ಸಂಚಾರಕ್ಕೆ ಆಗ್ರಹ

ಅಬುಧಾಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾರಿ ತಪ್ಪಿಸುವ ಮಾಹಿತಿ ಹಂಚಿಕೊಂಡ 375 ಮಂದಿ ಬಂಧನ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM1 Min Read

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read
Recent News

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
State News
KARNATAKA

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

By kannadanewsnow0909/04/2026 10:56 PM KARNATAKA 1 Min Read

ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಗರದ ಎಂಡಿಎಫ್ (MDF) ಸ್ವತಂತ್ರ ವಿಜ್ಞಾನ ಹಾಗೂ ವಾಣಿಜ್ಯ ಪದವಿ…

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.