ಸಾಗರ: ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಮನ್ನೇ ಗ್ರಾಮದ ವೃದ್ಧರೊಬ್ಬರು ಮಂಗನ ಕಾಯಿಲೆಗೆ (ಕೆಎಫ್ಡಿ) ಬಲಿಯಾಗಿದ್ದಾರೆ.
ಘಟನೆಯ ವಿವರ:
ದಂಡಿನಕಾರು ಗ್ರಾಮದ ನಿವಾಸಿ ಮಂಜಪ್ಪ (72) ಮೃತಪಟ್ಟ ದುರ್ದೈವಿ. ಏಪ್ರಿಲ್ 1ರಂದು ಇವರಿಗೆ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆಯಲ್ಲಿ ಏಪ್ರಿಲ್ 4ರಂದು ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದ ಸಾವು:
ಆಸ್ಪತ್ರೆಯಲ್ಲಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ತಪಾಸಣೆ ನಡೆಸಿದಾಗ ಕೆಎಫ್ಡಿ (KFD) ಸೋಂಕು ಇರುವುದು ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.








