Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್: ಜೂನ್‌.1ರಿಂದ ಸೆಂಟ್ರಲ್ ರೈಲ್ವೆ ನಿಲ್ದಾಣಗಳಲ್ಲಿ ವಡಾಪಾವ್, ಸಮೋಸಾ, ದೋಸೆ ಬೆಲೆ ಏರಿಕೆ!

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ
KARNATAKA

ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ

By kannadanewsnow57

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಮತ್ತು ತತ್ಸಮಾನ ವೃಂದದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೀರ್ಘಕಾಲದ ಪ್ರಕ್ರಿಯೆಯ ನಂತರ, ಅರ್ಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ಉಪಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ (Officiating Promotion) ನೀಡಿ ಇಲಾಖೆ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ?

ಬೆಂಗಳೂರು ವಿಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ/ಪದವಿಪೂರ್ವ ಕಾಲೇಜು ಹಾಗೂ ವಿವಿಧ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಗ್ರೇಡ್-2 ಸಹಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಉಲ್ಲೇಖ(1)ರನ್ವಯ ಪ್ರಕಟಿಸಲಾಗಿದೆ. ಸದರಿ ಜೇಷ್ಠತಾ ಪಟ್ಟಿಯನ್ನಾಧರಿಸಿ ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ಉಪಪ್ರಾಂಶುಪಾಲರ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಪ್ರೌಢಶಾಲಾ ಸಹಶಿಕ್ಷಕರಿಂದ ಪ್ರಸ್ತಾವನೆಗಳನ್ನು ಉಲ್ಲೇಖ(2) ರಲ್ಲಿ ಪಡೆಯಲಾಗಿದೆ.

ಉಲ್ಲೇಖ(3) ರಂತೆ ನಡೆದ ಇಲಾಖಾ ಮುಂಬಡ್ತಿ ಸಮಿತಿ ಸಭೆಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ ಬಡ್ತಿಗೆ ಅರ್ಹರಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ, ಗ್ರೂಪ್-ಬಿ ವೃಂದದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಉಪಪ್ರಾಂಶುಪಾಲರ ವೃಂದದ ಹುದ್ದೆಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ.

ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಮುಂಬಡ್ತಿ ಕೌನ್ಸಿಲಿಂಗ್ ಆದ್ಯತಾ ಪಟ್ಟಿಯನ್ನು ಪರಿಗಣಿಸಿ ಸ್ಥಳ ಆಯ್ಕೆ ಕೌನ್ಸಿಲಿಂಗ್ ಅನ್ನು ದಿನಾಂಕ: 11-12-2025 ರಂದು ನಡೆಸಲಾಗಿದೆ. ಸದರಿ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿ ಸ್ವ-ಇಚ್ಛೆಯಿಂದ ಸ್ಥಳ ಆಯ್ಕೆ ಮಾಡಿಕೊಂಡಿರುವ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ವೇತನ ಶ್ರೇಣಿ. 69250-134200 ರಲ್ಲಿ ಕರ್ನಾಟಕ ರಾಜ್ಯ ನಾಗರೀಕ ಸೇವಾ ನಿಯಮಗಳು 1958 ರ ನಿಯಮ 42(ಬಿ) ರನ್ವಯ ಸ್ಥಾನಪನ್ನ ಮುಂಬಡ್ತಿ ನೀಡಿ ಈ ಕೆಳಕಂಡ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ಉಪಪ್ರಾಂಶುಪಾಲರ ವೃಂದದ ಹುದ್ದೆಗಳಿಗೆ ಷರತ್ತಿಗೊಳಪಟ್ಟು ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

ಬಡ್ತಿ ಪ್ರಕ್ರಿಯೆಯ ವಿವರ:
ಆಯುಕ್ತರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಈ ಆದೇಶದನ್ವಯ, 2025ರ ಸೆಪ್ಟೆಂಬರ್‌ನಲ್ಲಿ ನಡೆದ ಇಲಾಖಾ ಮುಂಬಡ್ತಿ ಸಮಿತಿ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ದಿನಾಂಕ 11-12-2025 ರಂದು ನಡೆದ ಕೌನ್ಸೆಲಿಂಗ್‌ನಲ್ಲಿ ಶಿಕ್ಷಕರುಗಳು ಸ್ವ-ಇಚ್ಛೆಯಿಂದ ಆಯ್ಕೆ ಮಾಡಿಕೊಂಡ ಸ್ಥಳಗಳಿಗೆ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ವೇತನ ಶ್ರೇಣಿ:
ಈ ಬಡ್ತಿ ಪಡೆದ ಶಿಕ್ಷಕರಿಗೆ ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42(ಬಿ) ಅನ್ವಯ ರೂ. 69,250 – 1,34,200 ರ ವೇತನ ಶ್ರೇಣಿಯಲ್ಲಿ ವೇತನ ನಿಗದಿಪಡಿಸಲಾಗಿದೆ.

assignment of post Good news for the state's 'government high school teachers': Education Department orders promotion to headmaster
Share. Facebook Twitter LinkedIn WhatsApp Email

Related Posts

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

1 Min Read

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

3 Mins Read

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

2 Mins Read
Recent News

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್: ಜೂನ್‌.1ರಿಂದ ಸೆಂಟ್ರಲ್ ರೈಲ್ವೆ ನಿಲ್ದಾಣಗಳಲ್ಲಿ ವಡಾಪಾವ್, ಸಮೋಸಾ, ದೋಸೆ ಬೆಲೆ ಏರಿಕೆ!

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

State News
KARNATAKA

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ…

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.