Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಮೆರಿಕ-ಇರಾನ್ ಸಂಧಾನಕ್ಕೆ ಹಿನ್ನಡೆ: ‘ನಾವು ಅತ್ಯುತ್ತಮ ಆಫರ್ ನೀಡಿದ್ದೇವೆ, ಆದರೆ ಫಲಿತಾಂಶ ಶೂನ್ಯ’ : ಜೆಡಿ ವ್ಯಾನ್ಸ್ ಅಸಮಾಧಾನ!
INDIA

ಅಮೆರಿಕ-ಇರಾನ್ ಸಂಧಾನಕ್ಕೆ ಹಿನ್ನಡೆ: ‘ನಾವು ಅತ್ಯುತ್ತಮ ಆಫರ್ ನೀಡಿದ್ದೇವೆ, ಆದರೆ ಫಲಿತಾಂಶ ಶೂನ್ಯ’ : ಜೆಡಿ ವ್ಯಾನ್ಸ್ ಅಸಮಾಧಾನ!

By ಗೋಪಾಲ್‌ ಎನ್‌

ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಉನ್ನತ ಮಟ್ಟದ ಶಾಂತಿ ಮಾತುಕತೆಯ ಮೂರನೇ ಸುತ್ತು ಯಾವುದೇ ನಿರ್ಣಾಯಕ ತೀರ್ಮಾನವಿಲ್ಲದೆ ಮುಕ್ತಾಯಗೊಂಡಿದೆ. ಅಮೆರಿಕದ ನಿಯೋಗದ ನೇತೃತ್ವ ವಹಿಸಿರುವ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಮಾತುಕತೆಯಲ್ಲಿ ಸದ್ಯಕ್ಕೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ.

ಮಾತುಕತೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಜೆಡಿ ವ್ಯಾನ್ಸ್, “ನಾವು ಇರಾನ್‌ಗೆ ಅತ್ಯಂತ ಉದಾರವಾದ ಮತ್ತು ಉತ್ತಮವಾದ ಪ್ರಸ್ತಾಪವನ್ನು (Best Offer) ನೀಡಿದ್ದೇವೆ. ಇದು ಇಡೀ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸಲು ನೆರವಾಗುವಂತದ್ದು. ಆದರೆ ಇರಾನ್ ಕಡೆಯಿಂದ ನಮಗೆ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ,” ಎಂದು ಹೇಳಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಉಭಯ ದೇಶಗಳ ನಡುವೆ ಮೂರು ಸುತ್ತಿನ ಸುದೀರ್ಘ ಚರ್ಚೆಗಳು ನಡೆದಿವೆ. ಪರಮಾಣು ನಿಯಂತ್ರಣ, ಆರ್ಥಿಕ ನಿರ್ಬಂಧಗಳ ತೆರವು ಮತ್ತು ಕದನ ವಿರಾಮದ ಕುರಿತು ವಿಸ್ತೃತ ಚರ್ಚೆ ನಡೆದಿದ್ದರೂ, ಮುಖ್ಯ ವಿಷಯಗಳಲ್ಲಿ ಒಮ್ಮತ ಮೂಡಿಲ್ಲ.

 ಇರಾನ್ ತನ್ನ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪಟ್ಟು ಹಿಡಿದಿದೆ. ಆದರೆ ಅಮೆರಿಕವು ಮೊದಲು ಇರಾನ್ ತನ್ನ ಶಸ್ತ್ರಾಸ್ತ್ರ ಪೂರೈಕೆ ಮತ್ತು ಉಗ್ರ ಚಟುವಟಿಕೆಗಳಿಗೆ ನೀಡುವ ಬೆಂಬಲವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಿದೆ.

ಈ ಮಾತುಕತೆ ವಿಫಲವಾದರೆ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಭಾರತ ಸೇರಿದಂತೆ ಹಲವು ದೇಶಗಳು ಈ ಸಂಧಾನದ ಮೇಲೆ ಹೆಚ್ಚಿನ ಭರವಸೆ ಇಟ್ಟಿವೆ.

'Gave best offer to Iran no breakthrough yet': JD Vance after three rounds of US-Iran talks
Share. Facebook Twitter LinkedIn WhatsApp Email

Related Posts

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

1 Min Read

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

1 Min Read

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

2 Mins Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.