ಹಾಸನ : ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ಉಪ್ಪಿಟ್ಗಳ ಮುಂದುವರೆದಿದ್ದು ಇದೀಗ ಹಾಸನದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೀತಿನ ಮೇಲೆ ಏಕಾಏಕಿ ಕಾಡಾನೆ ಒಂದು ದಾಳಿ ಮಾಡಿದ್ದರಿಂದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ರೈತ ರಾಜಶೆಟ್ಟಿ(56) ಬಲಿಯಾಗಿದ್ದಾರೆ. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನ ಕೊಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








