ಚಿಕ್ಕಮಗಳೂರು : ಸಚಿವ ಸ್ಥಾನ ನೀಡುವಂತೆ ದೆಹಲಿಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದು, ಈ ವಿಚಾರವಾಗಿ, ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿಕ್ಕಮಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನಾರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದು ಹೇಳಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು-ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಉತ್ತರಿಸಿದರು.








