ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆಗೆ ಆಗ್ರಹಿಸಿ ದೆಹಲಿಗೆ ತೆರಳಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೈಕಮಾಂಡ್ ಹೇಳಿದರೆ ಇಂದೇ ಸಚಿವ ಸ್ಥಾನ ಬಿಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ ಶಾಸಕರು ಸಚಿವ ಸ್ಥಾನಕ್ಕಾಗಿ ಹೋಗಿದ್ದಾರೆ. ಎರಡುವರೆ ವರ್ಷದ ನಂತರ ಸಂಪುಟ ಪುನರ ರಚನೆ ಆಗುತ್ತೆ ಅಂತ ಇತ್ತು. ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಕೇಳುವುದಕ್ಕೆ ಬರಬೇಡಿ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡಲು ಹೋಗಿದ್ದಾರೆ ಅಷ್ಟೇ. ಹೈಕಮಾಂಡ್ ಹೇಳಿದರೆ ಖಂಡಿತ ಸಚಿವ ಸ್ಥಾನ ಬಿಡುತ್ತೇನೆ ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು.







