ಬೆಂಗಳೂರು : ಸಚಿವ ಸ್ಥಾನ ಬೇಡಿಕೆಗೆ ಆಗ್ರಹಿಸಿ ಕಾಂಗ್ರೆಸ್ಸಿನ ಕೆಲವು ಶಾಸಕರು ದೆಹಲಿಗೆ ತೆರಳಿದ್ದಾರೆ. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಕ್ಷದ ಶಿಸ್ತನ್ನು ಯಾರು ಮೀರಬೇಡಿ ಪಕ್ಷದ ಚೌಕಟ್ಟಿನ ಒಳಗೆ ಎಲ್ಲರೂ ಮಾತನಾಡಬೇಕು. ಇದು ಸಂಪುಟ ಪುನಾರಚನೆ ಕೇಳುವಂತ ಟೈಂ ಅಲ್ಲ ಎಂದು ಶಾಸಕರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಗೆ ಸಚಿವ ಸ್ಥಾನ ಬೇಡಿಕೆಗಾಗಿ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು ಪಕ್ಷಕ್ಕೆ ಗೌರವ ಕೊಡಬೇಕು. ಕೇವಲ ಮಾಧ್ಯಮಗಳ ಮುಂದೆ ಕುಳಿತು ಪಕ್ಷದ ಹೆಸರು ಹಾಳು ಮಾಡಬಾರದು. ಮುಂದಿನ ದಿನಗಳಲ್ಲಿ ಎಲ್ಲರ ಭವಿಷ್ಯ ಪಕ್ಷದಲ್ಲಿದೆ ಮಾಧ್ಯಮಗಳಲ್ಲಿ ಇಲ್ಲ ಎಂದು ದೆಹಲಿಗೆ ತೆರಳಿದ ಶಾಸಕರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.








