ಮಂಡ್ಯ :- ಉದ್ಯೋಗದ ನಿರೀಕ್ಷೆಯಲ್ಲಿರುವ ಮದ್ದೂರು ನಗರ ಮತ್ತು ಸುತ್ತಮುತ್ತಲಿನ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ.
ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರ ಹುಟ್ಟುಹಬ್ಬ ಹಾಗೂ ಅಕ್ಷರ ಫೌಂಡೇಶನ್ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಯುವಜನತೆಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ಏಪ್ರಿಲ್ 21 ರ ಮಂಗಳವಾರ ದಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಮದ್ದೂರು ನಗರದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮಹತ್ವದ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉದ್ಯೋಗ ಮೇಳದ ಮುಖ್ಯಾಂಶಗಳು
ಈಗಾಗಲೇ 50 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿವೆ.
ಈ ಬೃಹತ್ ಮೇಳದಲ್ಲಿ ಬರೋಬ್ಬರಿ 5000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುವುದು ವಿಶೇಷವಾಗಿದೆ.
ವಿದ್ಯಾರ್ಹತೆ ಏನು
ಈ ಉದ್ಯೋಗ ಮೇಳವು ಕೇವಲ ಉನ್ನತ ವ್ಯಾಸಂಗ ಮಾಡಿದವರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೊ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹಾಗೂ ವಿಶೇಷವಾಗಿ ಅಂಗವಿಕಲರಿಗೂ ಸಹ ಉದ್ಯೋಗಗಳು ಲಭ್ಯವಿದೆ ಎಂದರು.
ಯಾವೆಲ್ಲ ಕ್ಷೇತ್ರಗಳಲ್ಲಿ ಉದ್ಯೋಗ ಲಭ್ಯ
ಉತ್ಪಾದನಾ ವಲಯ, ಬ್ಯಾಂಕಿಂಗ್, ಮಾರಾಟ, ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಗಾರ್ಮೆಂಟ್ಸ್, ಸೇವಾ ವಲಯ, ಪ್ರವಾಸೋದ್ಯಮ, ಹಣಕಾಸು ಹಾಗೂ ನಿರ್ವಹಣಾ ಕ್ಷೇತ್ರ ಸೇರಿದಂತೆ ಹತ್ತು ಹಲವು ವಿಭಾಗಗಳಲ್ಲಿ ಅಭ್ಯರ್ಥಿಗಳು ತಮ್ಮ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಭಾಗವಹಿಸುವುದು ಹೇಗೆ
18 ವರ್ಷದಿಂದ 30 ದೊಳಗಿನ ಯಾವುದೇ ವಿದ್ಯಾರ್ಹತೆ ಹೊಂದಿರುವ ಯುವಕ ಹಾಗೂ ಯುವತಿ ಅಭ್ಯರ್ಥಿಗಳು ಈ ಮೇಳದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಮೊದಲೇ ಕಛೇರಿಗೆ ಭೇಟಿ ಕೊಟ್ಟು ಪೂರ್ವ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಥವಾ ಏ.21 ರಂದು ನೇರವಾಗಿ ಉದ್ಯೋಗ ಮೇಳ ನಡೆಯುವ ಸ್ಥಳಕ್ಕೆ ತಮ್ಮ ಎಲ್ಲಾ ಶೈಕ್ಷಣಿಕ ದಾಖಲಾತಿಗಳು ಹಾಗೂ ರೆಸ್ಯೂಮ್‌ನೊಂದಿಗೆ ( 10 ಪ್ರತಿಗಳು ) ಹಾಜರಾಗಿ, ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ.ಸತೀಶ್ ಮಾತನಾಡಿ, ಮದ್ದೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಯುವಜನತೆಗೆ ಉದ್ಯೋಗದ ದಾರಿಯನ್ನು ತೆರೆದಿಡುವುದು ಈ ಮೇಳದ ಪ್ರಮುಖ ಉದ್ದೇಶವಾಗಿದೆ. ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದು, ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಲಿದೆ ಎಂದರು.
ಸುದ್ದಿಗೊಷ್ಟಿಯಲ್ಲಿ ಕುಮಾರ್ ಉಪ್ಪಾರ್, ಮಹೇಂದ್ರ ಕುಮಾರ್, ಕಾಂತರಾಜು ಇದ್ದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸುಧಾಕರ್ – 8792143221
ದೇವರಾಜ್ – 7996163105
ಕಛೇರಿ – 7899488488
ವರದಿ : ಗಿರೀಶ್ ರಾಜ್, ಮಂಡ್ಯ
BREAKING: 2026-27ನೇ ಸಾಲಿನ ‘ರಾಜ್ಯ ಸರ್ಕಾರಿ ನೌಕರ’ರ ವರ್ಗಾವಣೆ ಮಾರ್ಗಸೂಚಿ ಪ್ರಕಟ, ಇಲ್ಲಿದೆ ಪುಲ್ ಡೀಟೆಲ್ಸ್








