ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಖಾಸಗಿ ಬಸ್ಗೆ ಬೈಕ್ ಅಡಿಕೆ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ಪಟ್ಟಣ ಹೊರವಲಯದ ಅಗ್ನಿಶಾಮಕ ಠಾಣೆ ಮುಂಭಾಗದ ಹೆದ್ದಾರಿಯ ತಿರುವಿನಲ್ಲಿ ನಡೆದಿದೆ.
ಮೃತರನ್ನು ಚಿತ್ರದುರ್ಗ ತಾಲೂಕಿನ ಕೋಡಿರಂಗವ್ವನಹಳ್ಳಿಯ ಮಂಜುನಾಥ (25), ಹೊಳಲ್ಕೆರೆ ತಾಲ್ಲೂಕಿನ ಗಣೇಶ್ ಗುಂಡಿಮಡು (27) ಮೃತಪಟ್ಟ ಬೈಕ್ ಸವಾರರೆಂದು ಗುರುತಿಸಲಾಗಿದೆ. ಚನ್ನಗಿರಿ ಕಡೆಯಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿಯಾಗಿದೆ.
ಬಸ್ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ತಕ್ಷಣ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








