ಬೆಂಗಳೂರು : ನಿನ್ನೆ ಬೆಂಗಳೂರಿನ ವೈಟ್ಫೀಲ್ಡ್ ವ್ಯಾಪ್ತಿಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಪಾಪಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ.
ಹೌದು ತಾಯಿ ಸಾವಿತ್ರಮ್ಮ (72) ಅವರನ್ನು ಪಾಪಿ ಪುತ್ರ ವೆಂಕಟೇಶ್ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ತಾಯಿ ಸಾವಿತ್ರಮ್ಮ ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲಿಯೇ ಇದ್ದರು. ಸುಮಾರು ನಾಲ್ಕರಿಂದ ಐದು ವರ್ಷದಿಂದ ತಾಯಿ ಸಾವಿತ್ರಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಮಗ ಬೇಸರದಿಂದ ತಾಯಿಯನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






