ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಈ ಒಂದು ಕೊಲೆ ಪ್ರಕರಣದಲ್ಲಿ ಒಳಸಂಚು ಆರೋಪದ ಹಿನ್ನೆಲೆ ಮನೆ ಕುಲಕರ್ಣಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು ಈ ಒಂದು ತೀರ್ಪು ಪ್ರಕಟಿಸಿದ್ದು ತೀರ್ಪು ಪ್ರಕಟ ಬೆನ್ನಲ್ಲೇ ಎಲ್ಲಾ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಳ್ಳಿ ಎಂದು ಕೋರ್ಟ್ ಸೂಚನೆ ನೀಡಿತು ಅದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇದೀಗ ಮತ್ತೆ ಜೈಲು ಸೇರಿದ್ದು, ವಿನಯ್ ಕುಲಕರ್ಣಿ ಅಪರಾಧಿ ಎಂದು ಕೋರ್ಟು ತೀರ್ಪು ಪ್ರಕಟಿಸಿದೆ.
ಕೊಲೆ ಪ್ರಕರಣದ ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಅಪರಾಧಿಗಳು ಎಂದು ಕೋರ್ಟು ತೀರ್ಪು ನೀಡಿದೆ. ನಾಳೆ ಶಿಕ್ಷಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಈ ವೇಳೆ ಅಪರಾಧಿಗಳನ್ನು ಕಸ್ಟಡಿಗೆ ಪಡೆಯಿರಿ ಎಂದು ಸೂಚನೆ ನೀಡಿತು. ಇನ್ನು ಪ್ರಕರಣದ A20 ವಾಸುದೇವ್ ನೀಲೇಕೆಣೆ, ಹಾಗೂ A21 ಸೋಮಶೇಖರ್ ನ್ಯಾಮಗೌಡ ಇಬ್ಬರನ್ನು ಬಿಡುಗಡೆಗೆ ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿತು. ಇವರಿಬ್ಬರನ್ನು ಹೊರತುಪಡಿಸಿ 19 ಜನ ಅಪರಾಧಿಗಳು ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ.








