ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ ಎಸ್ ಭರತ್ ಕುಮಾರ್, ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.








