ಟೆಹ್ರಾನ್: ಜಾಗತಿಕವಾಗಿ ತೀವ್ರ ಕುತೂಹಲ ಕೆರಳಿಸಿದ್ದ ಇರಾನ್ನ ‘ಹಾರ್ಮುಜ್ ಜಲಸಂಧಿ’ ಮುಕ್ತಗೊಳಿಸುವ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ಥ್ಯಾಂಕ್ ಯೂ, ಇರಾನ್” ಎಂದು ಹೇಳುವ ಮೂಲಕ ಟ್ರಂಪ್ ಅವರು ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯತ್ತ ಇರಾನ್ ಇಟ್ಟಿರುವ ಹೆಜ್ಜೆಯನ್ನು ಸ್ವಾಗತಿಸಿದ್ದಾರೆ.
ವಾಣಿಜ್ಯ ಹಡಗುಗಳ ಸಂಚಾರಕ್ಕೆ ಜಲಸಂಧಿಯನ್ನು ಸಂಪೂರ್ಣ ಮುಕ್ತಗೊಳಿಸಿರುವುದಕ್ಕೆ ಇರಾನ್ ರಾಷ್ಟ್ರಕ್ಕೆ ಟ್ರಂಪ್ ಧನ್ಯವಾದ ತಿಳಿಸಿದ್ದಾರೆ. ಇದು ಜಾಗತಿಕ ವ್ಯಾಪಾರ ಮತ್ತು ಆರ್ಥಿಕತೆಗೆ ಅತ್ಯಂತ ಅಗತ್ಯವಾದ ನಿರ್ಧಾರ ಎಂದು ಅವರು ಬಣ್ಣಿಸಿದ್ದಾರೆ.
ಸಾಮಾನ್ಯವಾಗಿ ಇರಾನ್ ವಿರುದ್ಧ ಕಠಿಣ ನಿಲುವು ತಳೆಯುವ ಟ್ರಂಪ್, ಈ ಬಾರಿ ಸಕಾರಾತ್ಮಕವಾಗಿ ಸ್ಪಂದಿಸಿರುವುದು ಅಂತರಾಷ್ಟ್ರೀಯ ರಾಜತಾಂತ್ರಿಕ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.
ಈ ಬೆಳವಣಿಗೆಯು ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಮುಂದಿನ ದಿನಗಳಲ್ಲಿ ಉತ್ತಮ ಸಂಬಂಧ ವೃದ್ಧಿಸಲು ನೆರವಾಗಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.








