ಬೆಂಗಳೂರು : ಇತ್ತೀಚಿಗೆ ನಾವು ತಿನ್ನುವ ಆಹಾರದಲ್ಲಿ ಕೆಮಿಕಲ್ ಬಳಕೆ ಮಾಡುತ್ತಿರುವುದು ಆಘಾತಕಾರಿ ಸಂಗತಿ ಆಗಿದೆ ಇದೀಗ ಹಣ್ಣುಗಳಲ್ಲೂ ಕೂಡ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ FSSAI ಕಳವಳ ವ್ಯಕ್ತಪಡಿಸಿದ್ದು ಈ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಹೌದು ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡುತ್ತಿದ್ದು, ಕಾಯಿ ಬೇಗನೆ ಹಣ್ಣಾಗಲು ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ ಮಾಡಲಾಗುತ್ತಿರುವ ಆತಂಕದ ವಿಚಾರ ಬಯಲಾಗಿದೆ. ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಯಾಗುತ್ತದೆ. ಚರ್ಮದ ಅಲ್ಸರ್, ವಾಂತಿ, ಗಂಟಲು ನೋವಿನ ಸಮಸ್ಯೆ ಉಲ್ಬಣಗೊಳ್ಳುತ್ತದೆ.
ಹೀಗಾಗಿ ಎಫ್‌ಎಸ್‌ಎಸ್‌ಎಐಯಿಂದ ಎಲ್ಲಾ ರಾಜ್ಯದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಹಣ್ಣುಗಳಿಗೆ ಕೆಮಿಕಲ್ ಬಳಕೆಯ ಬಗ್ಗೆ ಅಧಿಕಾರಿಗಳು ನಿಗಾ ವಹಿಸಬೇಕು ಅಂತಾ ಸೂಚನೆ ನೀಡಲಾಗಿದೆ. ಎಲ್ಲಾ ಮಂಡಿ, ವರ್ತಕರು, ಸ್ಟೋರೆಜ್‌ಗಳಿಗೆ ದಾಳಿ ನಡೆಸಿ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ರವಾನೆ ಮಾಡಲಾಗಿದೆ.








