ತಮಿಳುನಾಡು : ತಮಿಳುನಾಡಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಂದಗಕ್ಕೆ ವ್ಯಾನ್ ಉರುಳಿ ಬಿದ್ದ ಪರಿಣಾಮ 8 ಶಿಕ್ಷಕರು ಸೇರಿದಂತೆ 10 ಪ್ರವಾಸಿಗರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವಾಲ್ಪರೈ ಬೆಟ್ಟದಲ್ಲಿ ಈ ಒಂದು ದುರಂತ ಸಂಭವಿಸಿದೆ.
ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಈ ಒಂದು ವ್ಯಾನ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ಜನ ಸಾವನ್ನಪ್ಪಿದ್ದು, 6 ಪ್ರವಾಸಿಗರಿಗೆ ಗಂಭೀರವಾದ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಹಾಗೂ ಎಲ್ಲಾ ಗಾಯಾಳುಗಳು ಕೇರಳ ಮೂಲದವರು ಎಂದು ತಿಳಿದು ಬಂದಿದೆ.








