ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಿತ್ರಹಳ್ಳಿ ಗೇಟ್ ಬಳಿ ಬಯಕೆಗೆ ಕಾರುಡಿಕೆ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಮೃತರನ್ನು ಹೊಳಲ್ಕೆರೆ ಯಶವಂತ (30) ಹಾಗೂ ವಾಸುದೇವ (43) ಎಂದು ತಿಳಿದುಬಂದಿದ್ದು, ಹೊಳಲ್ಕೆರೆಗೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








