ಬೆಂಗಳೂರು : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. 1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ @INCIndia ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು.
ಅಂದು: ಶ್ರೀ @H_D_Devegowda ಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು.
ಇಂದು: ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ.
ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ. ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿರಾಶೆ ಬೇಕಿಲ್ಲ. ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ.
1996 ಮತ್ತು 2026; ಕರಾಳ ಇತಿಹಾಸ ಮರುಕಳಿಸಿದೆ! ಮೂರು ದಶಕಗಳ ನಂತರವೂ @INCIndia ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು.
ಅಂದು: ಶ್ರೀ @H_D_Devegowda ಅವರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ…
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 18, 2026








