ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ ಪ್ರಿಯಕರಣ ಜೊತೆಗೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿ ಎಂದು ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿಸಿದ್ದಾಳೆ.
ಹೌದು ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಅನುಮಾನಾಸ್ಪಾದ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜವರಪ್ಪ ಕೊಲೆಯಾದ ದುರ್ದೈವಿಯಾಗಿದ್ದು, ಪ್ರಕರಣ ಸಂಬಂಧ ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32) ಮತ್ತು ಕುರ್ಣೆಗಾಲ ಗ್ರಾಮದ ಅಮೃತಾ(26)ಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಸಂಬಂಧ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎನ್ನಲಾಗ್ತಿದೆ.
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದ್ದು, 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದಳು.ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಮನೆಗೆ ಹಿಂದಿರುಗಿ ಬಂದಿರಲಿಲ್ಲ.
ಬದಲಾಗಿ ಮರುದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆ ಜವರಪ್ಪ ಸಹೋದರ ರವಿ ನೀಡಿದ್ದ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಸಾವಿನ ಹಿಂದಿನ ಸತ್ಯವನ್ನು ರಿವೀಲ್ ಮಾಡಿದ್ದಾರೆ. ಆರೋಪಿ ಸಿದ್ದೇಶ್ಗೆ ಜವರಪ್ಪ ಪತ್ನಿ ಅಮೃತಾ ಜೊತೆಗೆ ಅಕ್ರಮ ಸಂಬಂಧ ಇತ್ತು. ಹೀಗಾಗಿ ಆತ ಇದ್ದರೆ ತಮ್ಮ ಸಂಬಂಧಕ್ಕೆ ತೊಂದರೆ ಆಗುತ್ತೆ ಎಂದು ಆರೋಪಿಗಳು ಜವರಪ್ಪನ ಕೊಲೆಗೆ ಪ್ಲ್ಯಾನ್ ಮಾಡಿದ್ದರು. ಅದರಂತೆ ಅಮೃತಾ ಕುಮ್ಮಕ್ಕಿನಿಂದ ಆಕೆಯ ಪ್ರಿಯಕರ ಸಿದ್ದೇಶ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.








